ಹಳಿ ತಪ್ಪಿದ ಕೈಫಿಯತ್ ಎಕ್ಸ್‌ಪ್ರೆಸ್, 50 ಜನರಿಗೆ ಗಾಯ |News Mirchi

ಹಳಿ ತಪ್ಪಿದ ಕೈಫಿಯತ್ ಎಕ್ಸ್‌ಪ್ರೆಸ್, 50 ಜನರಿಗೆ ಗಾಯ

ಉತ್ತರಪ್ರದೇಶದ ಆರಯ್ಯ ಬಳಿ ಬುಧವಾರ ಬೆಳಗಿನ ಜಾವ 2:40 ರಲ್ಲಿ ಕೈಫಿಯತ್ ಎಕ್ಸ್ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ಘಟನೆಯಲ್ಲಿ ಕನಿಷ್ಟ 50 ಜನ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುಗಳು ವರದಿಯಾಗಿಲ್ಲ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್‌ಎಫ್ ತಂಡವನ್ನು ಅಪಘಾತ ಸ್ಥಳಕ್ಕೆ ಕಳುಹಿಸಲಾಗಿದೆ. ಮೂರು ದಿನಗಳ ಹಿಂದಷ್ಟೇ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 22 ಜನರ ಸಾವಿಗೆ ಕಾರಣವಾಗಿತ್ತು.

Loading...
loading...
error: Content is protected !!