ನೀಟ್ ಪರೀಕ್ಷೆಯಲ್ಲಿ ಕನ್ನಡವಿಲ್ಲ: ಕೇಂದ್ರವನ್ನು ದೂರುವ ಮುನ್ನ… – News Mirchi

ನೀಟ್ ಪರೀಕ್ಷೆಯಲ್ಲಿ ಕನ್ನಡವಿಲ್ಲ: ಕೇಂದ್ರವನ್ನು ದೂರುವ ಮುನ್ನ…

ಕನ್ನಡದಲ್ಲಿ ನೀಟ್(ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಬರೆಯಲು ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿ ಕೇಂದ್ರಕ್ಕೆ ಪತ್ರ ಬರೆದಿದೆ. ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಸರ್ಕಾರವನ್ನು ದೂರುತ್ತಿದ್ದಾರೆ. ಆದರೆ ವಾಸ್ತವವೇನೆಂದರೆ ನೀಟ್ ಪರೀಕ್ಷೆಯಲ್ಲಿ ಸ್ಥಳೀಯ ಭಾಷೆಗಳನ್ನು ಸೇರಿಸಲು ಕೇಂದ್ರ ಹಲವು ರಾಜ್ಯಗಳ ಅಭಿಪ್ರಾಯ ಕೇಳಿತ್ತು.

ಆದರೆ ಆಗ ಕರ್ನಾಟಕ ಸರ್ಕಾರ ಇಂಗ್ಲೀಷಿನಲ್ಲಿ ಪರೀಕ್ಷೆ ನಡೆಸಲು ಒಪ್ಪಿಗೆ ಸೂಚಿಸಿತ್ತಲ್ಲದೆ, ಕನ್ನಡವನ್ನು ಸೇರಿಸುವ ಪ್ರಸ್ತಾವನೆಯನ್ನೇ ಮಾಡಿರಲಿಲ್ಲ. ಇದೀಗ ನೀಟ್ ಪರೀಕ್ಷೆಯಲ್ಲಿ ಕನ್ನಡ ಸೇರಿಸಿಲ್ಲ ಎಂದು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಭೆ ಕೂರಿಸುವ ಕೆಲಸ ಮಾಡುತ್ತಿದೆ.

ಇನ್ನು ರಾಜ್ಯ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆಗಳಲ್ಲಿಯೇ ಕನ್ನಡ ಭಾಷೆಯನ್ನು ಕರ್ನಾಟಕ ಸರ್ಕಾರ ಇದುವರೆಗೂ ಕಡ್ಡಾಯಗೊಳಿಸಿಲ್ಲ, ಅದರ ಬಗ್ಗೆ ಯೋಚಿಸಲಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

Loading...

Leave a Reply

Your email address will not be published.