ಮಹದಾಯಿಗಾಗಿ ಜನವರಿ 27 ರಂದು ಕರ್ನಾಟಕ ಬಂದ್ |News Mirchi

ಮಹದಾಯಿಗಾಗಿ ಜನವರಿ 27 ರಂದು ಕರ್ನಾಟಕ ಬಂದ್

ಬೆಂಗಳೂರು: ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಒತ್ತಾಯಿಸಿ ಜನವರಿ 27 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಜನವರಿ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸುತ್ತಿರುವುದರಿಂದ ಅವರ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ 27 ರಂದು ಬಂದ್ ಗೆ ಕರೆ ನೀಡಿರುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ನಡೆಸುತ್ತಿರುವ 75 ದಿನಗಳ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜನವರಿ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೇಲೆ ಒತ್ತಡ ಹೇರುವ ಸಲುವಾಗಿ ಜನವರಿ 27 ರಂದು ಬಂದ್ ಗೆ ಕರೆ ನೀಡಲಾಗಿದೆ.

ಮಹದಾಯಿ ವಿಷಯದಲ್ಲಿ ಮೋದಿಯವರು ಸೂಕ್ತ ಭರವಸೆ ನೀಡಿದರೆ ಬಂದ್ ಹಿಂಪಡೆಯಲು ಸಿದ್ದ ಎಂದು ಹೇಳಿರುವ ವಾಟಾಳ್, ಬಂದ್ ಗೆ ಎಲ್ಲಾ ಕನ್ನಡಪರ ಸಂಘಟನೆಗಳಿಂದ ಬೆಂಬಲ ಕೋರಿದ್ದಾರೆ. ಹಾಗೆಯೇ ತಾವು ನಡೆಸುವ ಬಂದ್ ಗೆ ರಾಜ್ಯ ಸರ್ಕಾರವೂ ಬೆಂಬಲಿಸಬೇಕು ಒತ್ತಾಯಿಸಿದ್ದಾರೆ.

ಈ ಹಿಂದೆ ನಡೆದಂತೆ ನಡೆಯಬಾರದು, ಈ ಬಾರಿ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲಿಸಬೇಕು. ಬಂದ್ ಗೆ ಬೆಂಬಲ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರಿಗೂ ಮನವಿ ಮಾಡುತ್ತಿದ್ದೇನೆ, ನರೇಂದ್ರ ಮೋದಿಯವರಿಗೆ ಕನ್ನಡಿಗರ ಶಕ್ತಿ ತೋರಿಸಬೇಕು ಎಂದು ವಾಟಾಳ್ ಹೇಳಿದ್ದಾರೆ.

ಬಂದ್ ದಿನದಂದು ಕನ್ನಡ ಚಲನಚಿತ್ರಗಳ ಚಿತ್ರೀಕರಣ ಸ್ಥಗಿತಗೊಳಿಸುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದ್ ಹೇಳಿದ್ದಾರೆ.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!