ಕರ್ನಾಟಕ ಪೊಲೀಸ್ ದೇಶದಲ್ಲಿಯೇ ನಂ.1 : ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಜನಸಂಖ್ಯೆಗೆ ತಕ್ಕಂತೆ ಅಪರಾಧ ಪ್ರಕರಣಗಳಲ್ಲೂ ಹೆಚ್ಚಳ ಕಾಣುತ್ತಿದೆ. 1 ಲಕ್ಷಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕೆ.ಎಸ್.ಆರ್.ಪಿ ಪೇದೆಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡುತ್ತಿದ್ದ ಅವರು, ಪೊಲೀಸ್ ಸಿಬ್ಬಂದಿಗಳಿಗಾಗಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ 28 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭರ್ತಿ ಮಾಡಲಾಗಿದೆ, 11 ಸಾವಿರ ಮನೆಗಳನ್ನು ಅವರಿಗಾಗಿ ನಿರ್ಮಿಸಲಾಗಿದೆ. 2020 ರ ವೇಳೆಗೆ ಇನ್ನು 4 ಸಾವಿರ ಮನೆ ನಿರ್ಮಾಣ ಮಾಡುವ ಯೋಜನೆಯಿದೆ ಎಂದ ಅವರು, ಪೊಲೀಸ್ ಸಿಬ್ಬಂದಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದರು.

Get Latest updates on WhatsApp. Send ‘Subscribe’ to 8550851559