ಕಾರವಾರ ಡಿಡಿಪಿಐ ಅಮಾನತು

ಕಾರವಾರ: ಶಿಕ್ಷಕರ ನೇಮಕ ವಿಚಾರದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಕಾರವಾರ ಡಿಡಿಪಿಐ ಎಬಿ ಪುಂಡಲೀಕ ಅವರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿದೆ. ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದ್ದರೂ ನೇಮಕ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಿದೆ.

ಶಿಕ್ಷಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮಂಕಾಳ ವೈದ್ಯ ಅವರು ನಗರದಲ್ಲಿ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಮುಂದೆ ಧರಣಿ ಕುಳಿತಿದ್ದರು.

Loading...

Leave a Reply

Your email address will not be published.

error: Content is protected !!