ಸಾಂಧರ್ಭಿಕ ಚಿತ್ರ

ಕಾವೇರಿ ಗಲಭೆ: 8 ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಜೈಲು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದನ್ನು ವಿರೋಧಿಸಿ 2012 ರಲ್ಲಿ ಪ್ರತಿಭಟನೆ ನಡೆಸಿದ್ದ 8 ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ 56 ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿದ ಆರೋಪ ಇವರ ಮೇಲಿತ್ತು.

ಕರವೇ ಕಾರ್ಯಕರ್ತರಾದ ರಘು ಗೌಡ, ನೀಲಕಂಠ ಗೌಡ, ಕುಮಾರ್, ಪ್ರಸನ್ನ, ಶ್ರೀನಿವಾಸ್, ಪ್ರಸನ್ನ, ಸತೀಶ್ ಮತ್ತು ದೀಪಕ್ ಶಿಕ್ಷೆಗೊಳಗಾದವರು. ನಂತರ ಶಿಕ್ಷೆಗೊಳಗಾದ ಕರವೇ ಕಾರ್ಯಕರ್ತರ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ 8 ಜನರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

2012 ಡಿಸೆಂಬರ್ ನಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಕೋರ್ಟ್ ತೀರ್ಪು ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಇವರ ಮೇಲೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೂಲ ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ಕಿಸಿ

Get Latest updates on WhatsApp. Send ‘Add Me’ to 8550851559