ಅತ್ಯಾಚಾರ ಆರೋಪದ ಮೇಲೆ ಕೇರಳ ಕಾಂಗ್ರೆಸ್ ಶಾಸಕನ ಬಂಧನ – News Mirchi

ಅತ್ಯಾಚಾರ ಆರೋಪದ ಮೇಲೆ ಕೇರಳ ಕಾಂಗ್ರೆಸ್ ಶಾಸಕನ ಬಂಧನ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೇರಳ ಕಾಂಗ್ರೆಸ್ ಶಾಸಕ ಎಂ.ವಿನ್ಸೆಂಟ್ ಅವರನ್ನು ಕೇರಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ವಿಶೇಷ ತನಿಖಾ ತಂಡ, ನಂತರ ಅವರನ್ನು ಬಂಧಿಸಿದೆ. ಎರಡು ದಿನಗಳ ಹಿಂದಷ್ಟೇ ಅವರ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು.

ತಮ್ಮ ಮೇಲಿನ ಆರೋಪಗಳ ಹಿನ್ನೆಲೆಯಲ್ಲಿ ವಿನ್ಸೆಂಟ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಿಳಾ ಕಾಂಗ್ರೆಸ್ ಮತ್ತು ಸಿಪಿಐ(ಎಂ) ವಿನ್ಸೆಂಟ್ ರಾಜೀನಾಮೆಗೆ ಒತ್ತಾಯಿಸಿದ್ದವು.

ಅತ್ಯಾಚಾರ ಪ್ರಕರಣದಲ್ಲಿ ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್.ಐ.ಆರ್

ವಿನ್ಸೆಂಟ್ ನಿಂದ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು. ಆತ್ಮಹತ್ಯೆ ಯತ್ನಕ್ಕೆ ಶಾಸಕ ವಿನ್ಸೆಂಟ್ ಕಾರಣ ಎಂದು ಆಕೆ ಪೊಲೀಸರಿಗೆ ಹೇಳಿಕೆ ನೀಡಿದ್ದಳು.

Loading...