ಸರ್ಜಿಕಲ್ ಸ್ಟ್ರೈಕ್ ರಾಜಕೀಯಗೊಳಿಸುತ್ತಿದೆ ಬಿಜೆಪಿ : ಖರ್ಗೆ

: ಸಶಸ್ತ್ರ ಪಡೆಗಳನ್ನು ಬಿಜೆಪಿ ನಾಯಕರು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಆರೋಪಿಸಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಇಂದಿರಾಗಾಂಧಿಯವರ 32 ನೇ ಪುಣ್ಯತಿಥಿ ಅಂಗವಾಗಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ಬಿಜೆಪಿಯವರು ಪೈಪೋಟಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಯೋಧರನ್ನು ಹೊಗಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇಷ್ಟು ದಿನ ಬಿಜೆಪಿಯವರು ಯೋಧರನ್ನು ಮರೆತಿದ್ದೇಕೆ ಎಂದು ಪ್ರಶ್ನಿಸಿದರು. ನಮ್ಮ ಯೋಧರ ಬಗ್ಗೆ ನಮಗೆ ಹೆಮ್ಮೆ ಇದೆ, ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಸರ್ಜಿಕಲ್ ದಾಳಿಯ ಹಿರಿಮೆಯನ್ನು ಯೋಧರಿಗೆ ನೀಡದೆ ತಮ್ಮ ಸಾಧನೆ ಎಂಬಂತೆ ಬಿಜೆಪಿ ನಾಯಕರು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದರು.

ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿದ , ವಿರೋಧಿಸುತ್ತಿರುವ ಅರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ವಿಷಯದಲ್ಲಿ ಜಾತಿ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ ಎಂದರು. ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರವನ್ನು ತಮ್ಮ ಕಛೇರಿಯಲ್ಲಿ ಇಡಲು ಹಿಂಜರಿಯುತ್ತಿದ್ದವರು ಈಗ ಅಂಬೇಡ್ಕರ್ ಅವರನ್ನು ಹೊಗಳುವುದರಲ್ಲಿ ಸ್ಪರ್ಧೆಗಿಳಿದಿದ್ದಾರೆ ಎಂದು ಅರೋಪಿಸಿದರು.

Related News

loading...
error: Content is protected !!