ಯೋಗಿ ಆಯ್ಕೆ ಸರಿಯಲ್ಲ: ಖರ್ಗೆ – News Mirchi

ಯೋಗಿ ಆಯ್ಕೆ ಸರಿಯಲ್ಲ: ಖರ್ಗೆ

ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಯ್ಕೆ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಆಯ್ಕೆ ಬಿಜೆಪಿಯ ಆಂತರಿಕ ವಿಚಾರ, ಆದರೆ ಯೋಗಿ ಆದಿತ್ಯನಾಥ್ ಕಟ್ಟರ್ ಹಿಂದೂವಾದಿ, ಹಲವು ಬಾರಿ ಸಂವಿಧಾನ ವಿರೋಧಿ ಹೇಳಿಕೆ ನೀಡಿ ಹಿಂಸೆಗೆ ಪ್ರಚೋದಿಸಿದ್ದಾರೆ. ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರ ಆಡಳಿತ ವೈಖರಿಯನ್ನು ಕಾದು ನೋಡಬೇಕಿದೆ ಎಂದರು.

ಉತ್ತರಪ್ರದೇಶದ 21 ನೆಯ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು (ಭಾನುವಾರ) ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ರಾಮ್ ನಾಯಕ್ ಅದಿತ್ಯನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈಶ್ವರನ ಹೆಸರಿನಲ್ಲಿ ಯೋಗಿ ಅದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು.

Click for More Interesting News

Loading...

Leave a Reply

Your email address will not be published.

error: Content is protected !!