ಕೋಲಾರ: ವಿದ್ಯುತ್ ಸಂಪರ್ಕ ಕಡಿತಕ್ಕೆ ಮುಂದಾದ ಸಿಬ್ಬಂದಿ ಮೇಲೆ ಸ್ಥಳೀಯರಿಂದ ಹಲ್ಲೆ

ಕೋಲಾರ: ವಿದ್ಯುತ್ ಬಿಲ್ ಪಾವತಿಸದ ಮನೆಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಮುಂದಾದ ಬೆಸ್ಕಾಂ ಸಿಬ್ಬಂದಿ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಕೋಲಾರದ ಗಲ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ದೇವಾಂಗಪೇಟೆ ಬಡವಾಣೆಯಲ್ಲಿ ವಿದ್ಯುತ್ ಬಿಲ್ ಪಾವತಿಸದ ಮನೆಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಬೆಸ್ಕಾಂ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಬೆಸ್ಕಾಂ ಸಿಬ್ಬಂದಿ ಮತ್ತು ಸ್ಥಳೀಯರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಬೆಸ್ಕಾಂ ಸಿಬ್ಬಂದಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ಖಂಡಿಸಿ ಬೆಸ್ಕಾಂ ಸಿಬ್ಬಂದಿ ಬೆಸ್ಕಾಂ ಕಛೇರಿಯೆದರು ಪ್ರತಿಭಟನೆ ನಡೆಸಿದ್ದಾರೆ.