ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಪತ್ನಿಯ ಮೇಲೆ ಅತ್ಯಾಚಾರ ಯತ್ನ – News Mirchi

ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಪತ್ನಿಯ ಮೇಲೆ ಅತ್ಯಾಚಾರ ಯತ್ನ

ಕೋಲಾರ: ಪತಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರಕ್ಕೆ ಮುಂದಾದ ಘಟನೆ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸ್ಟೌವ್ ಸಿಡಿದು ಗಾಯಗೊಂಡಿದ್ದ ಪತಿ ವಾಜಿಮ್ ನನ್ನು ಆಸ್ಪತ್ರೆಗೆ ಮಹಿಳೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಾಗಿನಿಂದಲೂ ಆಸ್ಪತ್ರೆಯ ಡಿ ಗ್ರೂಪ್ ನೌಕರ ಸುರೇಶ್ ಎಂಬಾತ ಮಹಿಳೆಯನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದನೆನ್ನಲಾಗಿದೆ.

ಶನಿವಾರ ಸಂಜೆ ಔಷಧ ತರಲು ಹೋಗುತ್ತಿದ್ದ ಮಹಿಳೆಯನ್ನು ತಡೆದು ತಾನು ಔಷಧ ನೀಡುವುದಾಗಿ ಕತ್ತಲಕೋಣೆಯೊಳಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ಸಂಬಂಧಿಕರು ಆಸ್ಪತ್ರೆ ನೌಕರ ಸುರೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನೌಕರನನ್ನು ಕರ್ತವ್ಯದಿಂದ ಅಮಾನತು ಮಾಡಿ ಶಸ್ತ್ರಚಿಕಿತ್ಸಕ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ಸುರೇಶ್ ಗಾಗಿ ಹುಡುಕಾಟ ನಡೆಸಿದ್ದಾರೆ.

Get Latest updates on WhatsApp. Send ‘Add Me’ to 8550851559

Contact for any Electrical Works across Bengaluru

Loading...
error: Content is protected !!