ಮರಳಿ ಗೂಡಿಗೆ ಸೇರಿದ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ |News Mirchi

ಮರಳಿ ಗೂಡಿಗೆ ಸೇರಿದ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರಿಂದ ಮುನಿಸಿಕೊಂಡು ಬಿಜೆಪಿ ತೊರೆದಿದ್ದ ಮಾಲೂ ಕ್ಷೇತ್ರ ಮಾಜಿ ಶಾಸಕ ಕೃಷ್ಣಯ್ಯ ಶೆಟ್ಟಿ ಅವರು ಇಂದು ಮತ್ತೆ ಬಿಜೆಪಿ ಮರಳಿದ್ದಾರೆ. ಬಿಜೆಪಿ ಕೇಂದ್ರ ಕಛೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೃಷ್ಣಯ್ಯ ಶೆಟ್ಟಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಹಿಂದೆ ದುಡುಕಿ ತಪ್ಪು ಮಾಡಿದ್ದೇನೆ, ಇನ್ನು ಬಿಜೆಪಿ ಬಿಟ್ಟು ಎಲ್ಲೂ ಹೋಗುವುದಿಲ್ಲ. ಕೋಲಾರ ಜಿಲ್ಲೆಯ ಜನರ ಋಣ ತೀರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಬಿಜೆಪಿಗೆ ಮರುಸೇರ್ಪಡೆಗೊಂಡ ಕೃಷ್ಣಯ್ಯ ಶೆಟ್ಟಿ ಹೇಳಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಕೃಷ್ಣಯ್ಯ ಶೆಟ್ಟಿ, ಸೋಲುಂಡಿದ್ದರು. ನಂತರದ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಂದ ದೂರವೇ ಉಳಿದಿದ್ದರು. ಇದೀಗ ಕೃಷ್ಣಯ್ಯ ಶೆಟ್ಟಿ ಬಿಜೆಪಿ ಸೇರ್ಪಡೆಯಿಂದ ಕೋಲಾರ ಭಾಗದಲ್ಲಿ ಪಕ್ಷಕ್ಕೆ ಬಲ ಬಂದಂತಾಗಿದೆ.

Loading...
loading...
error: Content is protected !!