ಕೆಎಸ್‌ಸಿಎ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ರಾಜೀನಾಮೆ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ‌ ಅನುರಾಗ್ ಠಾಕೂರ್, ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಹುದ್ದೆಯಿಂದ ತೊಲಗಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಮರುದಿನವೇ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‌ಸಿಎ) ಲೋಧಾ ಸಮಿತಿಯ ಶಿಫಾರಸುಗಳನ್ನು ಪಾಲಿಸಲು ಮುಂದಾಗಿದೆ. ಇದರ ಪರಿಣಾಮ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಖಜಾಂಚಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಕೆಎಸ್‌ಸಿಎ ಅಧ್ಯಕ್ಷ ಪಿಆರ್ ಅಶೋಕ್, ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಮತ್ತು ಖಜಾಂಚಿ ಪಿ.ದಯಾನಂದ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಬ್ರಿಜೇಶ್ ಪಟೇಲ್ ಅವರಿಗೆ 64 ವರ್ಷ ವಯಸ್ಸಾಗಿದೆ. ಆದರೆ 15 ವರ್ಷಗಳ ಕಾಲ ಕೆಎಸ್‌ಸಿಎ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಲೋಧಾ ಸಮಿತಿ ಶಿಫಾರಸಿನ ಪ್ರಕಾರ 9 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿ ಮುಂದುವರೆಯುವಂತಿಲ್ಲ.

ಅಶೋಕ ಆನಂದ್ ಮತ್ತು ದಯಾನಂದ ಪೈ ಅವರಿಗೆ 70 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಕಾರಣ ಲೋಧಾ ಸಮಿತಿ ಶಿಫಾರಸಿನ ಪ್ರಕಾರ ಹುದ್ದೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ.

Loading...

Leave a Reply

Your email address will not be published.

error: Content is protected !!