ರಸ್ತೆ ಒತ್ತುವರಿ ವಿರುದ್ಧ ದೂರು ನೀಡಿದರೂ ಸ್ಪಂದಿಸದ ಅಧಿಕಾರಿಗಳು

ಚಿಂತಾಮಣಿ: ರಸ್ತೆ ಜಾಗವನ್ನು ಅತಿಕ್ರಮಣ ಮಾಡಿ ಅನಧಿಕೃತವಾಗಿ ಆ ಜಾಗದಲ್ಲಿ ಶೌಚಾಲಯ, ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆಂದು ದಾಖಲೆಗಳ ಸಮೇತ ದೂರು ನೀಡಿದರೂ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಪೂಲನಾಯಕನಹಳ್ಳಿ ನಿವಾಸಿ ದೇವರಾಜ್ ಆರೋಪಿಸುತ್ತಿದ್ದಾರೆ.

ಕೊರ್ಲಪರ್ತಿ ಪಂಚಾಯ್ತಿ ವ್ಯಾಪ್ತಿಯ ಪೂಲನಾಯಕನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರು ಆ. 15 ಅಡಿಗಳ ರಸ್ತೆ ಜಾಗದಲ್ಲಿ 10 ಅಡಿಗಳನ್ನು ಅತಿಕ್ರಮಮಿಸಿಕೊಂಡಿದ್ದಾರೆ ಎಂದು ದೇವರಾಜ್ ಆರೋಪಿಸಿದ್ದಾರೆ.

ದೂರುದಾರ ದೇವರಾಜ್

ದಾಖಲೆಗಳ ಸಮೇತ ಗ್ರಾಮ ಪಂಚಾಯ್ತಿಯಲ್ಲಿ ದೂರು ನೀಡಿದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ದೇವರಾಜ್ ಅರೋಪಿಸಿದ್ದಾರೆ. ಈ ಕುರಿತು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಮತ್ತು ತಾಲ್ಲೂಕು ಪಂಚಾಯ್ತಿ ಕಛೇರಿಯ ಕಾರ್ಯನಿರ್ವಹಣಾಧಿಕಾರಿ, ತಹಶೀಲ್ದಾರ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದೇನೆ. ಆದರೆ ಅವರಿಂದಲೂ ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೇವರಾಜ್ ನೀಡಿರುವ ದೂರು

ರಸ್ತೆಯನ್ನು ಆಕ್ರಮಿಸಿಕೊಂಡ ಕಾರಣ ತಮ್ಮ ಮನೆಗಳಿಗೆ ರಸ್ತೆ ಇಲ್ಲದಂತಾಗಿದೆ. ಅಧಿಕಾರಿಗಳು, ಉಳ್ಳವರು ಬಲಾಡ್ಯರ ಪರವಾಗಿ ನಿಂತಿದ್ದಾರೆ ಮುಂದೇನು ಮಾಡಬೇಕೆಂದು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ತಾಲ್ಲೂಕು ಪಂಚಾಯ್ತಿ ಇಒ ಶ್ರೀನಿವಾಸ್

ಇನ್ನು ಈ ದೂರಿನ ಕುರಿತು ಪ್ರತಿಕ್ರಿಯಿಸಿರುವ ತಾಲ್ಲೂಕ್ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ರಸ್ತೆ ಅತಿಕ್ರಿಮಿಸಿರುವ ವಿಷಯ ನಮ್ಮ ಗಮನಕ್ಕೆ ಬಂದಿಲ್ಲ. ಪಿಡಿಒ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Get Latest updates on WhatsApp. Send ‘Subscribe’ to 8550851559