ಮತ್ತೆ ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ್ – News Mirchi

ಮತ್ತೆ ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳು ಹೆಸರು ಬಳಸಿ ವಿವಾದಕ್ಕೀಡಾಗಿದ್ದ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ಮತ್ತೆ ನೀಡಿದರು.

ಶಂಕರ್ ಬಿದರಿಯವರೊಂದಿಗೆ ಶ್ರೀಗಳ ಭೇಟಿ ಮಾಡಿದ ನಂತರ ಮಾತನಾಡಿದ ಸಚಿವರು, ಶ್ರೀಗಳು ಆಧುನಿಕ ಬಸವಣ್ಣ, ಅವರ ಆಶೀರ್ವಾದ ಪಡೆದಿದ್ದೇನೆ ಎಂದಷ್ಟೇ ಹೇಳಿ ಪ್ರತ್ಯೇಕ ಧರ್ಮ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.

ವಿವಾದಗಳು ಕೊನೆಗೊಂಡಿದ್ದು, ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಎಂದು ತಿಳಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳು ಬೆಂಬಲಿಸಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ್ದರು. ಆದರೆ ಸಚಿವರ ಹೇಳಿಕೆಯನ್ನು ಅಲ್ಲಗೆಳೆದ ಸಿದ್ದಗಂಗಾ ಮಠ, ಯಾವುದೇ ಬೆಂಬಲ ನೀಡಿಲ್ಲವೆಂದು ಪತ್ರಿಕಾ ಪ್ರಕಟಣೆ ನೀಡಿತ್ತು. ಹೀಗಾಗಿ ಶ್ರೀಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತೀವ್ರ ಆಕ್ರೋಶವಾಗಿತ್ತು.

Get Latest updates on WhatsApp. Send ‘Add Me’ to 8550851559

Contact for any Electrical Works across Bengaluru

Loading...
error: Content is protected !!