ಗರ್ಭಿಣಿಯರಿಗೂ ಮಧ್ಯಾಹ್ನದ ಬಿಸಿಯೂಟ

ಬೆಂಗಳೂರು: ಸದ್ಯ ರಾಜ್ಯದ 2 – 3 ತಾಲ್ಲೂಕುಗಳಲ್ಲಿ ಜಾರಿಗೆ ತಂದಿರುವ ಗರ್ಭಿಣಿಯರಿಗೆ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಮಕ್ಕಳಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ತಾಯಂದಿರಿಗೆ ಪೌಷ್ಠಿಕ ಅಹಾರ ಅಗತ್ಯ, ಹೀಗಾಗಿ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದರು.

ಮರೆಯಾಗುತ್ತಿರುವ ಸಾಂಸ್ಕೃತಿಕ ವೈಭೋಗವನ್ನು ಮುಂದಿನ ಪೀಳಿಗೆಗೂ ತಲುಪಿಸುವ ಉದ್ದೇಶದಿಂದ ಮಕ್ಕಳ ಹಬ್ಬ ಆಯೋಜಿಸಲಾಗಿದೆ ಎಂದರು.