ಸಹಕಾರ ಸಚಿವ ಮಹದೇವ ಪ್ರಸಾದ್ ವಿಧಿವಶ – News Mirchi

ಸಹಕಾರ ಸಚಿವ ಮಹದೇವ ಪ್ರಸಾದ್ ವಿಧಿವಶ

ಸಹಕಾರ ಸಚಿವ ಮಹದೇವ ಪ್ರಸಾದ್ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಖಾಸಗಿ ಕೆಲಸದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದ ಸಚಿವ ಮಹದೇವ ಪ್ರಸಾದ್ ಅವರು ರೆಸಾರ್ಟ್ ಒಂದರಲ್ಲಿ ತಂಗಿದ್ದರು. ರೆಸಾರ್ಟ್ ನಲ್ಲಿ ಮಲಗಿದ್ದ ವೇಳೆ ಹೃದಯಾಘಾತ ಸಂಭವಿಸಿದೆ.

ಸಚಿವರ ಅಕಾಲಿಕ ಮರಣಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಹದೇವ ಪ್ರಸಾದ್ ಅವರ ಅಂತ್ಯ ಕ್ರಿಯೆ ಅವರ ಹುಟ್ಟೂರಾದ ಹಾಲಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

Loading...

Leave a Reply

Your email address will not be published.