ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಗೆ ಟಿ.ಆರ್.ಎಸ್ ಬೆಂಬಲ – News Mirchi

ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಗೆ ಟಿ.ಆರ್.ಎಸ್ ಬೆಂಬಲ

ರಾಷ್ಟ್ರಪತಿ ಚುನಾವಣೆಗೆ ತಮ್ಮ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರಿಗೆ ಟಿ.ಆರ್.ಎಸ್ ಬೆಂಬಲ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರ ನಿವಾಸಕ್ಕೆ ಭೇಟಿ ನೀಡಿದ ತೆಲಂಗಾಣ ಸಚಿವ ಕೆ.ಟಿ.ರಾಮಾರಾವ್ (ಕೆ.ಟಿ.ಆರ್), ದೇಶದ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರದೊಂದಿಗೆ ಉತ್ತಮ ಬಾಂಧವ್ಯವನ್ನೇ ಹೊಂದಿರುವ ಟಿ.ಆರ್.ಎಸ್, ಈ ಹಿಂದೆಯೂ ನೋಟು ರದ್ದು ಕ್ರಮ, ಜಿಎಸ್ಟಿ ಬೆಂಬಲ ನೀಡಿತ್ತು.

ರಾಮನಾಥ್ ಕೋವಿಂದ್ ಒಬ್ಬ ಶಿಕ್ಷಣ ತಜ್ಞರಾಗಿದ್ದಾರೆ. ದಲಿತ ಸಮುದಾಯದ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ಕೆ.ಟಿ.ಆರ್ ಹೇಳಿದ್ದಾರೆ.

Loading...