ಅಭಿವೃದ್ಧಿ ವಿಚಾರದಲ್ಲಿ ಟೀಕೆ ಮಾಡಿ ಕಾಲಹರಣ ಬೇಡ: ಶಾಸಕ ಸುಧಾಕರ್

: ತಾಲ್ಲೂಕಿನ ಅಣಕನೂರು ಗ್ರಾಮದಲ್ಲಿ ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಶಾಸಕ ಕೆ.ಸುಧಾಕರ್ ಉದ್ಘಾಟಿಸಿದರು. ಫ್ಲೋರೈಡ್‌ಯುಕ್ತ ನೀರಿನಿಂದಾಗಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಹಾಗಾಗಿ 7.5 ಲಕ್ಷ ರೂ ವೆಚ್ಚದಲ್ಲಿ ಶುದ್ಧೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿನ ಕೆರೆಗಳ ಹೂಳೆತ್ತುವ ಕಾರ್ಯ ನಡೆಯಲಿದ್ದು ಅಮಾನಿಕೆರೆ ಹೂಳೆತ್ತುವುದಕ್ಕಾಗಿ ಮತ್ತು ಕೆರೆ ಪುನಶ್ಚೇತನಕ್ಕಾಗಿ 20 ಕೋಟಿ ಮಂಜೂರಾಗಿದೆ ಎಂದರು. ಅಭಿವೃದ್ಧಿ ವಿಚಾರದಲ್ಲಿ ಟೀಕೆ ಮಾಡುತ್ತಾ ಕಾಲಹರಣ ಮಾಡುವುದು ಬೇಡ ಎಂದು ಕಿವಿಮಾತು ಹೇಳಿದರು.

Related News

loading...
error: Content is protected !!