ನೋಟು ರದ್ದು ಪ್ರಕ್ರಿಯೆ ಕೂಡಲೇ ನಿಲ್ಲಿಸಿ: ಖರ್ಗೆ |News Mirchi

ನೋಟು ರದ್ದು ಪ್ರಕ್ರಿಯೆ ಕೂಡಲೇ ನಿಲ್ಲಿಸಿ: ಖರ್ಗೆ

ಕರ್ನೂಲ್: ನೋಟು ರದ್ದು ಕುರಿತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಕೇಳಿರುವ ಪ್ರಶ್ನೆಗಳಿಗೆ ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರ ನೀಡಬೇಕು, ಸಚಿವರು ಉತ್ತರಿಸಿದರೆ ಒಪ್ಪಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಗರಿಷ್ಠ ಮುಖ ಬೆಲೆಯ ನೋಟು ರದ್ದಾದ ಕಾರಣ ದೇಶದಲ್ಲಿನ ಜನತೆ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಶನಿವಾರ ಕರ್ನೂಲಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಖರ್ಗೆ, ಲೋಕಸಭೆ ಮತ್ತು ರಾಜ್ಯ ಸಭೆಗಳಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಎಂ, ಆಪ್, ಬಿಎಸ್ಪಿ, ತೃಣಮೂಲ ಕಾಂಗ್ರೆಸ್, ಆರ್‌ಎಸ್‌ಪಿ ಮುಂತಾದ ಪಕ್ಷಗಳು ದೊಡ್ಡ ನೋಟು ರದ್ದು ಕುರಿತು ಓಟಿಂಗ್ ಗಾಗಿ ಒತ್ತಾಯಿಸುತ್ತಿದ್ದರೆ ಸರ್ಕಾರ ಪರಾರಿಯಾಗುತ್ತಿದೆ ಎಂದು ಆರೋಪಿಸಿದರು.

ಎನ್ಡಿಎ ಮಿತ್ರ ಪಕ್ಷವಾದ ಶಿವಸೇನೆ ಕೂಡಾ ಜನರ ಪರವಾಗಿ ಪ್ರಶ್ನಿಸುತ್ತಿದ್ದರೂ ಸರ್ಕಾರ ಮೌನವಹಿಸಿರುವುದರ ಕುರಿತು ಹೀಗಾಗಿ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಕೂಡಲೇ ನೋಟು ರದ್ದು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಬೇಕು, ಆಗಿರುವ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು ಎಂದರು.

Loading...
loading...
error: Content is protected !!