ಕೃಷಿ ಹೊಂಡಕ್ಕೆ ಹಾರಿ ತಾಯಿ ಮಗಳ ಆತ್ಮಹತ್ಯೆ

ಚಿಂತಾಮಣಿ, ಫೆ.14 : ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ತಾಲ್ಲೂಕಿನ ಕುರುಬೂರು ಬಳಿ ನಡೆದಿದೆ.

ಕುರುಬೂರು ಗ್ರಾಮದ ಚೌಡಮ್ಮ (55) ಮತ್ತು ಆಕೆಯ ಮಗಳು ನಿರ್ಮಲಾ (24) ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದ ಚಿಂತಾಮಣಿ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ದಾವಿಸಿ ಮೃತದೇಹಗಳನ್ನು ಹೊರತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Get Latest updates on WhatsApp. Send ‘Subscribe’ to 8550851559