ಸಂಸದ ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆಗೆ ಜೀವ ಬೆದರಿಕೆ, ದೂರು ದಾಖಲು – News Mirchi

ಸಂಸದ ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬೆನ್ನಲ್ಲೇ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಚಕ್ರವರ್ತಿ ಸೂಲಿಬೆಲೆ ಅವರಿಗೆ ಟ್ವಟರ್ ಮೂಲಕ ಜೀವ ಬೆದರಿಕೆಯೊಂದು ಬಂದಿದ್ದು, ಸಂಸದ ಪ್ರತಾಪ್ ಸಿಂಹ ಅವರು ಈ ಕುರಿತು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅನಂತಮೂರ್ತಿ ಎಂಬ ವ್ಯಕ್ತಿ ನಿರಂತರವಾಗಿ ಟ್ವೀಟ್ ಮಾಡಿದ್ದಾನೆ. “ನಾನು ಮುಂದೆ ಒಂದು ದಿನ… ಆದರೆ ಮುಗಿಸಿ ಚಕ್ರವರ್ತಿ ಸೂಲಿಬೆಲೆ ಮತ್ತು ಪ್ರತಾಪ್ ಸಿಂಹ ಇವರನ್ನ” ಎಂದು ಕೊಲ್ಲುವ ಬೆದರಿಕೆ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಅನಂತಮೂರ್ತಿ ಎಂಬಾತ ಅಪರಾಧಗಳಿಗೆ ಪ್ರಚೋದನೆ ನೀಡುತ್ತಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂಸದ ಪ್ರತಾಪ್ ದೂರು ದಾಖಲಿಸಿದ್ದಾರೆ.

Loading...