ಆದ್ಯತೆಯ ಖಾತೆ ನೀಡಿದ್ದಕ್ಕೆ ಧನ್ಯವಾದಗಳು |News Mirchi

ಆದ್ಯತೆಯ ಖಾತೆ ನೀಡಿದ್ದಕ್ಕೆ ಧನ್ಯವಾದಗಳು

ಕ್ರೀಡಾಪಟುಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕ್ರೀಡಾ ಒಕ್ಕೂಟಗಳಿಗೆ ಕ್ರೀಡಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯವರ್ಧನ್ ಸಿಂಗ್ ರಾಥೋಡ್ ಮನವಿ ಮಾಡಿದ್ದಾರೆ. ತಮ್ಮ ಮೇಲೆ ನಂಬಿಕೆಯಿಟ್ಟು ಆದ್ಯತೆಯ ಇಲಾಖೆ ನೀಡಿದ್ದಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

ಇನ್ನು ಕೇಂದ್ರ ಕ್ರೀಡಾ ಸಚಿವರಾದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಪಾತ್ರರಾಗಿದ್ದಾರೆ. ಒಬ್ಬ ಕ್ರೀಡಾಪಟು ಈ ಖಾತೆಯನ್ನು ಪಡೆಯುತ್ತಿರುವುದು ಇದೇ ಮೊದಲು. ರಾಜ್ಯವರ್ಧನ್ ಸಿಂಗ್ ರಾಥೋಡ್ 2004 ರಲ್ಲಿ ಅಥೆನ್ಸ್ ಒಲಂಪಿಕ್ಸ್ ನಲ್ಲಿ ಡಬಲ್ ಟ್ರ್ಯಾಪ್ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಕಾಮನ್ ವೆಲ್ತ್, ಏಷ್ಯಾ ಕ್ರೀಡಾಕೂಟಗಳಲ್ಲೂ ಪದಕ ಗಳಿಸಿದ್ದಾರೆ. 2005 ರಲ್ಲಿ ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ. ಕ್ರೀಡಾಪಟುವಾಗಿದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಕ್ರೀಡೆಗೆ ಸಂಬಂಧಿಸಿದ ಖಾತೆಯನ್ನು ನೀಡಿರುವುದರಿಂದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Loading...
loading...
error: Content is protected !!