ಪ್ರಧಾನಿಯನ್ನು ಭೇಟಿ ಮಾಡುವ ಅಗತ್ಯವಿಲ್ಲ – News Mirchi

ಪ್ರಧಾನಿಯನ್ನು ಭೇಟಿ ಮಾಡುವ ಅಗತ್ಯವಿಲ್ಲ

ಭುವನೇಶ್ವರ್: ಎರಡು ದಿನಗಳ ಒಡಿಶಾ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಉದ್ಧೇಶ ತಮಗಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ರಾಜಕೀಯ ಗುರಿಯೊಂದಿಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ, ಹೀಗಾಗಿ ಅವರನ್ನು ಅವರನ್ನು ಭೇಟಿ ಮಾಡುವ ಉದ್ದೇಶ ತನಗಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರೊಂದಿಗೆ ಬಿಜೆಪಿ ಅಗ್ರನಾಯಕರೆಲ್ಲಾ ಭುವನೇಶ್ವರ್ ಗೆ ಆಗಮಿಸಿದ್ದಾರೆ. 2019 ರ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ಅವರನ್ನು ಕುರ್ಚಿಯಿಂದ ಕೆಳಗಿಳಿಸುವುದೇ ತಮ್ಮ ಗುರಿಯೆಂದು ಬಿಜೆಪಿ ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

Loading...