ಮೊದಲ ಬಾರಿಗೆ ಸಚಿವರಾಗಲಿರುವ ಸಿಧು |News Mirchi

ಮೊದಲ ಬಾರಿಗೆ ಸಚಿವರಾಗಲಿರುವ ಸಿಧು

ಭಾರತದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕನಸು ಈಡೇರುತ್ತಿದೆ. ಮೊದಲ ಬಾರಿಗೆ ಸಿಧು ಸಚಿವರಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಹತ್ತು ವರ್ಷಗಳ ನಂತರ ಪಂಜಾಬ್ ನಲ್ಲಿ ಪುನಃ ಅಧಿಕಾರಕ್ಕೇರುತ್ತಿದೆ. ಹೀಗಾಗಿ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗುರುವಾರ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದ ನವಜೋತ್ ಸಿಂಗ್ ಸಿಧು ಜೊತೆಗೆ ಮತ್ತಷ್ಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಸಿಧುಗೆ ಯಾವ ಖಾತೆ ನೀಡಲಿದ್ದಾರೆ ಎಂಬ ವಿಷಯದಲ್ಲಿ ಇನ್ನೂ ಸ್ಪಷ್ಟತೆಯಿಲ್ಲ. ಅಂದ ಹಾಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

Loading...
loading...
error: Content is protected !!