ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ರಾಜೀನಾಮೆ – News Mirchi

ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ರಾಜೀನಾಮೆ

ಪ್ರಸಿದ್ಧ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಗಸ್ಟ್ 31 ರವರೆಗೆ ಕಾರ್ಯನಿರ್ವಹಿಸಲಿರುವ ಅವರು, ನಂತರ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಮುಂದುವರೆವುದಾಗಿ ಹೇಳಿದ್ದಾರೆ.

2015 ಜನವರಿಯಲ್ಲಿ ಹೊಸದಾಗಿ ಸೃಷ್ಟಿಯಾದ ನೀತಿ ಆಯೋಗದ ಉಪಾಧ್ಯಕ್ಷರಾಗಿ ಅರವಿಂದ್ ಪನಗರಿಯಾ ಅವರು ಜವಾಬ್ದಾರಿ ವಹಿಸಿಕೊಂಡಿದ್ದರು. 65 ವರ್ಷದ ಹಳೆಯ ಯೋಜನಾ ಆಯೋಗದ ಬದಲಿಗೆ ನೀತಿ ಆಯೋಗ ಸೃಷ್ಟಿಯಾಗಿತ್ತು.

ನೀತಿ ಆಯೋಗದ ಉಪಾಧ್ಯಕ್ಷರಾಗುವುದಕ್ಕೂ ಮುನ್ನ ಅವರು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನಲ್ಲಿ ಪ್ರಧಾನ ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಯೂನಿವರ್ಸಿಟಿ ಆಫ್ ಮೇರಿಲ್ಯಾಂಡ್ ನ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ನ ಪ್ರಾಧ್ಯಾಪಕರಾಗಿ ಮತ್ತು ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

Loading...