ಅವಧಿಪೂರ್ವ ಚುನಾವಣೆ ಗೊಂದಲಕ್ಕೆ ತೆರೆ ಎಳೆದ ಸಿಎಂ |News Mirchi

ಅವಧಿಪೂರ್ವ ಚುನಾವಣೆ ಗೊಂದಲಕ್ಕೆ ತೆರೆ ಎಳೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಅವಧಿಪೂರ್ವ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಲ್ಲಿಯೇ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿಯ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ನಂತರ ಮಾತನಾಡಿದ ಸಿಎಂ, ಮುಂದಿನ ಚುನಾವಣೆ ಮಹತ್ವದ್ದಾಗಿದ್ದು, ಸಹಜವಾಗಿಯೇ ಹೆಚ್ಚಿನ ನಮ್ಮ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ ಎಂದು ಹೇಳಿದರು. ಪ್ರಣಾಳಿಕೆಯಲ್ಲಿ ಹೇಳಿದಂತೆ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ ಎಂದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳ ಕುರಿತು ಸಾರ್ವಜನಿಕ ಚರ್ಚೆಗೆ ಸಿದ್ಧ ಎಂದರು.

  • No items.

ಬಿಜೆಪಿ ಕೆಲಸಕ್ಕಿಂತ ಬರೀ ಮಾತೇ ಹೆಚ್ಚಾಗಿದ್ದು, ಜಾತಿ ಮತ್ತು ಧರ್ಮಗಳನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಅಧಿಕಾರದಲ್ಲಿದ್ದಾಗ ದಲಿತರಿಗೇನೂ ಮಾಡದವರು, ಈಗ ದಲಿತರ ಮನೆಗಳಿಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಯನ್ನೂ ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾಂಗ್ರೆಸ್ ನಡಿಗೆ ಮರಳಿ ಜನರ ಬಳಿಗೆ ಕಾರ್ಯಕ್ರಮವನ್ನು ಮತ್ತೆ ಮುಂದುವರೆಸುವುದಾಗಿ ಹೇಳಿದರು. ಈ ಅಭಿಯಾನದ ಭಾಗವಾಗಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಮನೆಗೆ ತೆರಳಿ ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತು ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.

Loading...
loading...
error: Content is protected !!