ಹೊಸ ವರ್ಷಾಚರಣೆಗೆ ನಗರದಲ್ಲಿ ಸನ್ನಿ ಲಿಯೋನ್ ಗಿಲ್ಲ ಅನುಮತಿ |News Mirchi

ಹೊಸ ವರ್ಷಾಚರಣೆಗೆ ನಗರದಲ್ಲಿ ಸನ್ನಿ ಲಿಯೋನ್ ಗಿಲ್ಲ ಅನುಮತಿ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಪ್ರತಿಭಟನೆಯ ಫಲವಾಗಿ ನಗರದಲ್ಲಿ ಡಿಸೆಂಬರ್ 31 ರಂದು ನಡೆಯಲಿದ್ದ ಹೊಸ ವರ್ಷ ಆಚರಣೆಯ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಪಾಲ್ಗೊಳ್ಳಲು ಅನುಮತಿ ನೀಡದಿರಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ನೀಲಿ ಚಿತ್ರಗಳ ತಾರೆ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಕೆಲವು ಕನ್ನಡ ಸಂಘಟನೆಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು.

ಇಂತಹ ಯಾವುದೇ ಕಾರ್ಯಕ್ರಮಗಳಿಗೆ ಸರ್ಕಾರ ಅನುಮತಿ ನೀಡಿಲ್ಲ. ನೀಲಿ ಚಿತ್ರಗಳ ತಾರೆ ಸನ್ನಿ ಲಿಯೋನ್ ಪಾಲ್ಗೊಳ್ಳಲಿದ್ದ ಟೈಮ್ಸ್ ಕ್ರಿಯೇಷನ್ಸ್ ರ ಡಿಸೆಂಬರ್ 31 ರ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸಂಸ್ಕೃತಿಯಂತೆ ಸೀರೆ ಉಟ್ಟು ಕಾರ್ಯಕ್ರಮಕ್ಕೆ ಹಾಜರಾದರೆ ನಮ್ಮ ಆಕ್ಷೇಪವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯದರ್ಶಿ ಜಯದೇವ ಪ್ರಸಾದ್ ಹೇಳಿದ್ದಾರೆ. ಒಂದು ವೇಳೆ ತುಂಡುಡುಗೆ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ನಾವು ಕಾರ್ಯಕ್ರಮದಲ್ಲಿ ಆತ್ಮಹತ್ಯೆಗೆ ಶರಣಾಗುವುದಾಗಿ ಎಚ್ಚರಿಸಿದ್ದರು. ‘ಸನ್ನಿ ನೈಟ್ ಇನ್ ಬೆಂಗಳೂರು ನ್ಯೂ ಇಯರ್ ಇವೆಂಟ್ 2018′ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಕೆಯನ್ನು ಆಹ್ವಾನಿಸಲಾಗಿತ್ತು. ನಾವು ಈಗಾಗಲೇ 70 ಟಿಕೆಟ್ ಗಳನ್ನು ಖರೀದಿಸಿದ್ದೇವೆ. ಆಕೆ ಏನಾದರೂ ತುಂಡುಡುಕೆ ಧರಿಸಿ ಕುಣಿದರೆ ನಾವು ಅಲ್ಲಿಯೇ ಪ್ರತಿಭಟಿಸಿ ಆತ್ಮಹತ್ಯೆಗೆ ಶರಣಾಗುವ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಲು ಯತ್ನಿಸುತ್ತೇವೆ’ ಎಂದು ಅವರು ಹೇಳಿದ್ದರು.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!