ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲಾಗದು: ತಮಿಳುನಾಡು ನಿಯೋಗಕ್ಕೆ ರಾಜ್ಯ ಸರ್ಕಾರದ ಸ್ಪಷ್ಟನೆ |News Mirchi

ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲಾಗದು: ತಮಿಳುನಾಡು ನಿಯೋಗಕ್ಕೆ ರಾಜ್ಯ ಸರ್ಕಾರದ ಸ್ಪಷ್ಟನೆ

ಮಾನವೀಯ ನೆಲೆಯಲ್ಲಿ 3 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಮನವಿ ಮಾಡಿದ್ದ ತಮಿಳುನಾಡಿನ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿ ನೇತೃತ್ವದ ನಿಯೋಗಕ್ಕೆ, ಸದ್ಯದ ಪರಿಸ್ಥಿತಿಯಲ್ಲಿ ನೀರು ಹರಿಸಲು ಸಾಧ್ಯವಿಲ್ಲವೆಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ ಖುಂಟಿ ಸ್ಪಷ್ಟಪಡಿಸಿದ್ದಾರೆ.

ನಾಲ್ಕೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕೇವಲ 8.8 ಟಿಎಂಸಿ ಇದ್ದು, ಕಾವೇರಿ ಜಲಾನಯನ ಪ್ರದೇಶಗಳಿಗೆ ಪ್ರತಿ ತಿಂಗಳು 3 ಟಿಎಂಸಿ ಬೇಕಾಗುತ್ತದೆ. ರಾಜ್ಯವು ನೀರಿನ ಕೊರತೆ ಎದುರಿಸುತ್ತಿದ್ದು, ಸದ್ಯ ನೀರು ಹರಿಸಲು ಕಷ್ಟ ಎಂದು ತಮಿಳುನಾಡಿನ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಸುಭಾಶ್ ಚಂದ್ರ ಹೇಳಿದ್ದಾರೆ. ಮುಂದೆ ಮಳೆಯಾದರೆ ಮಾನವೀಯ ನೆಲೆಯಲ್ಲಿ ನೀರು ಹರಿಸಲು ಪ್ರಯತ್ನಿಸುತ್ತೇವೆ ಎಂದರು.

Loading...
loading...
error: Content is protected !!