ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ನಾಗರಿಕರ ಹತ್ಯೆ – News Mirchi

ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ನಾಗರಿಕರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟಾರ್ ನಲ್ಲಿನ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಸಿದ್ದು, ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದೆ. ವರದಿಗಳ ಪ್ರಕಾರ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಭಾನುವಾರ ಬೆಳಗ್ಗೆ 6:30ಕ್ಕೆ ಪಾಕ್ ಗುಂಡಿನ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಸದ್ಯ ಭಾರತೀಯ ಸೇನೆ ಪಾಕ್ ಸೇನೆ ವಿರುದ್ಧ ಪ್ರತಿದಾಳಿ ನಡೆಸುತ್ತಿದೆ.

Loading...