ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ: ನಿಯಮ ರೂಪಿಸಲು ಸಮಿತಿ |News Mirchi

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ: ನಿಯಮ ರೂಪಿಸಲು ಸಮಿತಿ

ನವದೆಹಲಿ: ಚಿತ್ರಮಂದಿರಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ರಾಷ್ಟ್ರಗೀತೆಯನ್ನು ನುಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿಗೆ ಹೇಳಿದೆ.

ಸಮಿತಿಯು ನಿಯಮಗಳನ್ನು ರೂಪಿಸುವವರೆಗೂ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರವನ್ನು ಕಡ್ಡಾಯ ಮಾಡಿ ನವೆಂಬರ್, 2016 ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಚಾಲ್ತಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕೆ ಎಂಬುದರ ಕುರಿತು ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಈ ಕುರಿತು ತನ್ನ ನಿರ್ಧಾರ ತಿಳಿಸಲು ಜನವರಿ 2018 ರವರೆಗೆ ಕೇಂದ್ರಕ್ಕೆ ಗಡುವು ನೀಡಿತ್ತು.

English Summary: The government on Monday told the Supreme Court it would set up a panel to frame rules for playing the national anthem in theatres and public places.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!