ಜೆಡಿಎಸ್ ಪರ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ? |News Mirchi

ಜೆಡಿಎಸ್ ಪರ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ?

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳೂ ಪ್ರಚಾರವನ್ನು ಈಗಾಗಲೇ ಆರಂಭಿಸಿವೆ. ಜೆಡಿಎಸ್ ಮೂಲಗಳಿಂದ ಇದೀಗ ಲೇಟೆಸ್ಟ್ ಸುದ್ದಿಯೊಂದು ಬಂದಿದೆ. ಪ್ರಸಿದ್ಧ ತೆಲುಗು ಚಿತ್ರನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರ ಪ್ರಚಾರ ಮಾಡಲಿದ್ದಾರಂತೆ.

ತೆಲುಗು ಭಾಷಿಕರು ಹೆಚ್ಚಾಗಿರುವ ಭಾಗಗಳಲ್ಲಿ ಪವನ್ ಇಮೇಜ್ ಅನ್ನು ಬಳಸಿಕೊಳ್ಳಲು ಜೆಡಿಎಸ್ ಮುಂದಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಚಾರ ಮಾಡಿಸುವ ಮೂಲಕ ಮತದಾರರನ್ನು ಸೆಳೆಯಲು ಜೆಡಿಎಸ್ ರಣತಂತ್ರ ರೂಪಿಸಿದೆ.

ಈ ಹಿಂದೆ ಪವನ್ ಕಲ್ಯಾಣ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿಯವರು ಭೇಟಿ ಮಾಡಿದ್ದರು. ಆಗಲೇ ಇಂತದ್ದೊಂದು ಸುಳಿವು ರಾಜ್ಯದ ಜನತೆಗೆ ಸಿಕ್ಕಿತ್ತು. ಈಗ ಅದು ನಿಜವಾಗಿದೆ. ಜೆಡಿಎಸ್ ಪರ ಚುನಾವಣಾ ಪ್ರಚಾರಕ್ಕೆ ಬರುವ ವಿಷಯದಲ್ಲಿ ಪವನ್ ಕಲ್ಯಾಣ್ ಜೊತೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ಕುಮಾರ ಸ್ವಾಮಿ ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಮಾತ್ರವಲ್ಲ, ಜೆಡಿಎಸ್ ಪರ ಮತ್ತಷ್ಟು ನಟರು ಪ್ರಚಾರ ಕಣಕ್ಕಿಳಿಯಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಬುಧವಾರ ಬಿಡುಗಡೆಯಾದ ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷೆಯ ಚಿತ್ರ ಯಶಸ್ವಿಯಾಗಲೆಂದು ಕುಮಾರ ಸ್ವಾಮಿ ಅವರು ಹಾರೈಸಿದ್ದರು. ರಾಜಕಾರಣಕ್ಕೆ ಇಳಿದಿರುವ ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ಗೆ ಈ ಚಿತ್ರದ ಯಶಸ್ಸು ಬಹಳ ಮಹತ್ವವೂ ಆಗಿತ್ತು. ಈ ಹಿಂದೆ ಪವನ್ ಗೆ ಎರಡು ಬ್ಲಾಕ್ ಬಸ್ಟರ್ ಚಿತ್ರ ನಿರ್ದೇಶಿಸಿದ್ದ ತ್ರಿವಿಕ್ರಮ್ ನಿರ್ದೇಶನದ ಚಿತ್ರವೂ ಇದಾಗಿದ್ದರಿಂದ ಚಿತ್ರದ ಮೇಲೆ ಬಹಳ ನಿರೀಕ್ಷೆಗಳಿದ್ದವು. ಆದರೆ ಬಿಡುಗಡೆಯಾದ ದಿನವೇ ಚಿತ್ರ ಎಲ್ಲರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!