ಇಂದು ಮಧ್ಯರಾತ್ರಿಯಿಂದ ಪೆಟ್ರೋಲ್ ಡೀಸೆಲ್ ದರ ಏರಿಕೆ |News Mirchi

ಇಂದು ಮಧ್ಯರಾತ್ರಿಯಿಂದ ಪೆಟ್ರೋಲ್ ಡೀಸೆಲ್ ದರ ಏರಿಕೆ

ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳವಾಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ರೂ.1.39 ಮತ್ತು ಡೀಸೆಲ್ ಬೆಲೆಯಲ್ಲಿ ರೂ. 1.04 ಹೆಚ್ಚಳವಾಗಲಿದೆ ಎಂದು ಹೇಳಿದೆ.

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಇಲ್ಲೂ ಬೆಲೆ ಏರಿಕೆಗೆ ಕಾರಣವಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಳಿತಗಳ ಆಧಾರದ ಮೇಲೆ ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಡೀಸೆಲ್ ದರಗಳನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಈಗ ಚಿಂತನೆ ನಡೆದಿದೆ. ಇದನ್ನು ಪ್ರಾಯೋಗಿಕವಾಗಿ ಉದಯಪುರ, ಜೆಮ್ಶೆಡ್‌ಪುರ, ಪಾಂಡಿಚೆರಿ, ಚಂಡೀಘಡ ಮತ್ತು ವೈಜಾಗ್ ನಗರಗಳಲ್ಲಿ ಜಾರಿಗೆ ತರಲಾಗುತ್ತದೆ.

Loading...
loading...
error: Content is protected !!