ಫಕೀರ ಅಂತಾರೆ, 10 ಲಕ್ಷದ ಸೂಟ್ ಧರಿಸ್ತಾರೆ : ಕೇಜ್ರಿವಾಲ್

ಎಎಪಿ ಸಂಚಾಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮುಂದುವರಿಸಿದ್ದಾರೆ. ಪ್ರಧಾನಿ ಮೋದಿ ತಮ್ಮನ್ನು ಫಕೀರ ಎಂದು ಕರೆದುಕೊಳ್ಳುತ್ತಾರೆ, ಆದರೆ 10 ಲಕ್ಷ ಮೌಲ್ಯದ ಸೂಟ್ ಧರಿಸುತ್ತಾರೆ ಎಂದು ವ್ಯಂಗ್ಯವಾಡಿದರು.

ಉತ್ತರ ಪ್ರದೇಶದ ಮೊರದಾಬಾದಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ, ಕಪ್ಪು ಹಣದ ವಿರುದ್ಧ ಹೋರಾಟ ನಡೆಸುತ್ತಿರುವುದಕ್ಕೆ ತಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ತಾನೊಬ್ಬ ಫಕೀರ, ತನ್ನನ್ನು ಯಾರೂ ಏನೂ ಮಾಡಲಾರರು ಎಂದು ಭಾವೋದ್ವೇಗದಿಂದ ಪ್ರಧಾನಿ ಮೋದಿ ಹೇಳಿದ್ದರು.

ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಫಕೀರರು ದುಬಾರಿ ಸೂಟ್ ಧರಿಸುತ್ತಾರಾ ಎಂದು ಟ್ವೀಟ್ ಮಾಡಿದ್ದಾರೆ. ದೇಶ 65 ವರ್ಷಗಳಲ್ಲಿ ಸಾಧಿಸಿದ್ದನ್ನು ಮೋದಿ 5 ವರ್ಷಗಳಲ್ಲಿ ನಾಶ ಮಾಡುತ್ತಾರೆ ಎಂದು ಆರೋಪಿಸಿದರು.