ಕಿರುಕುಳ ಆರೋಪ: ಕೆಎಎಸ್ ಅಧಿಕಾರಿ ಭೀಮಾನಾಯಕ್ ಬಂಧನ

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕೆಎಎಸ್ ಅಧಿಕಾರಿ ಭೀಮಾನಾಯಕ್ ಅವರ ಕಾರು ಚಾಲಕ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಭೀಮಾನಾಯಕ್ ಅವರನ್ನು ಬಂಧಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ರಮೇಶ್ ಬರೆದಿಟ್ಟ ಡೆತ್ ನೋಟ್ ನಲ್ಲಿ ಗಣಿ ಧಣಿ ಜನಾರ್ಧನರೆಡ್ಡಿ ಅವರು 100 ಕೋಟಿ ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಲು ಕೆಎಎಸ್ ಅಧಿಕಾರಿ ಭೀಮಾನಯಕ್ ಅವರು ಸಹಕರಿಸಿದ್ದರು. ಅದನ್ನು ತಿಳಿದಿದ್ದ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ರಮೇಶ್ ಆರೋಪಿಸಿದ್ದರು.

ಮಂಡ್ಯ ಮತ್ತು ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಕೆಎಎಸ್ ಅಧಿಕಾರಿ ಭೀಮಾನಾಯಕ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.