ನಿತೀಶ್ ಮನವೊಲಿಕೆಗೆ ಮುಂದಾದ ಲಾಲೂ – News Mirchi

ನಿತೀಶ್ ಮನವೊಲಿಕೆಗೆ ಮುಂದಾದ ಲಾಲೂ

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸಲು ನಿರ್ಧರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನವೊಲಿಕೆಗೆ ಲಾಲೂ ಪ್ರಸಾದ್ ಯಾದವ್ ಮುಂದಾಗಿದ್ದಾರೆ. ಪ್ರತಿಪಕ್ಷಗಳು ಆಯ್ಕೆ ಮಾಡಿರುವ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸುವಂತೆ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸಲಿದ್ದೇನೆ ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

ಈ ಹಿಂದೆ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂದು ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದ ನಿತೀಶ್, ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸುತ್ತಿದ್ದಂತೆ ಪ್ರತಿಪಕ್ಷಗಳಿಗೆ ಕೈ ಕೊಟ್ಟು ಬಿಜೆಪಿ ಅಭ್ಯರ್ಥಿಗೆ ಜೈ ಅಂದಿದ್ದಾರೆ. ನಿತೀಶ್ ಕುಮಾರ್ ಅವರ ನಿಲುವು ಬದಲಾಗುತ್ತಿದ್ದಂತೆ ಬಿಜೆಪಿ ವಿರುದ್ಧ ಒಂದಾಗಿದ್ದ ಪ್ರತಿಪಕ್ಷಗಳ ಒಗ್ಗಟ್ಟು ಒಡೆದಂತಾಗಿದೆ.

Loading...