ಲಕ್ಷ್ಮೀ ಹೆಬ್ಬಾಳ್ಕರ್ ಗಡಿಪಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಳಗಾವಿಯ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಸುಪ್ರೀಂ ತೀರ್ಮಾನಿಸಿದರೆ ನಾನೇ ಮೊದಲು ಮಹಾರಾಷ್ಟ್ರ ಬಾವುಟ ಹಿಡಿದು ಮಹಾರಾಷ್ಟ್ರಕ್ಕೆ ಜೈ ಅಂತೀನಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿರುವ ಕರ್ನಾಟಕ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗಡೀಪಾರು ಮಾಡುವಂತೆ ಒತ್ತಾಯಿಸಿ ಕನ್ನಡ ಪರ ಹೋರಾಟಗಾರರು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಾ.ರಾ.ಗೋವಿಂದು ಮತ್ತು ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.