ಶಾಶ್ವತ ನೀರಾವರಿಗಾಗಿ 196 ನೇ ದಿನಕ್ಕೆ ಕಾಲಿಟ್ಟ ಧರಣಿ

ಕೋಲಾರ: ಬರ ಪೀಡಿತ ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮತ್ತು ಕೆರೆಗಳ ಪುನಶ್ಚೇತನ ಮಾಡುವಂತೆ ಒತ್ತಾಯಿಸಿ ‘ಶಾಶ್ವತ ನೀರಾವರಿ ಹೋರಾಟ ಸಮಿತಿ’ ಕೋಲಾರದಲ್ಲಿ ನಡೆಸುತ್ತಿರುವ ನಿರಂತರ ಧರಣಿ 196 ನೇ ದಿನಕ್ಕೆ ಕಾಲಿಟ್ಟಿದೆ.

ರೈತರು ತಮ್ಮ ವೈಯುಕ್ತಿ ಕೆಲಸ ಕಾರ್ಯಗಳನ್ನು ಬದಿಗಿಟ್ಟು ನಿರಂತರ ಧರಣಿಯಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡು ಬರುತ್ತಿದೆ. ಧರಣಿ 196 ನೇ ದಿನಕ್ಕೆ ಕಾಲಿಟ್ಟರೂ ಸರ್ಕಾರ ಸೂಕ್ತವಾಗಿ ಸ್ಪಂದಿಸದೆ ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂದು ಧರಣಿ ನಿರತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರ ಹೀಗೆಯೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ನೀರಾವರಿ ಹೋರಾಟಗಾರರು ಎಚ್ಚರಿಸಿದ್ದಾರೆ.