ರಾಷ್ಟ್ರದ್ವಜ ಹರಿದ ಚೀನಾದ ವ್ಯಕ್ತಿ, ನೋಯ್ಡಾದ ಒಪ್ಪೋ ಕಂಪನಿಯ ವಿರುದ್ಧ ಆಕ್ರೋಶ

ನೋಯ್ಡಾ: ಚೀನಾದ ಮೊಬೈಲ್ ತಯಾರಿಕಾ ಕಂಪನಿ “ಒಪ್ಪೋ” ಕಂಪನಿಯ ಚೀನಾ ಮೂಲದ ಉದ್ಯೋಗಿಯೊಬ್ಬರು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನಿಸಿದರೆಂದು ನೋಯ್ಡಾದ ಒಪ್ಪೊ ಕಛೇರಿಯ ಎದುರು ಪ್ರತಿಭಟನೆ ನಡೆದಿದೆ. ಉದ್ಯೋಗಿಯೊಬ್ಬ ರಾಷ್ಟ್ರದ್ವಜವನ್ನು ಹರಿದು ಕಸದ ಬುಟ್ಟಿಗೆ ಎಸೆದಿದ್ದಾನೆನ್ನಲಾಗಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಇತರೆ ಭಾರತೀಯ ಉದ್ಯೋಗಿಗಳನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ಕೆಲವರು ರಾಷ್ಟ್ರದ್ವಜ ಹಿಡಿದು “ಒಪ್ಪೊ ಇಂಡಿಯಾ” ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಪ್ಪೋ ಕಂಪನಿಯಲ್ಲಿ ಕೆಲಸ ಮಾಡುವ ಇತರೆ ಉದ್ಯೋಗಿಗಳು ಮತ್ತು ವಿಶ್ವ ಹಿಂದೂ ಪರಿಷತ್ ಸದಸ್ಯರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

ಕಛೇರಿಯಲ್ಲಿ ಎಲ್ಲಾ ಕಡೆ ಸಿಸಿಟಿವಿ ಅಳವಡಿಸಿದ್ದು, ಅದನ್ನು ಪರಿಶೀಲಿಸುವಂತೆ ಪೊಲೀಸರಿಗೆ ಕೇಳಿದ್ದೇವೆ. ರಾಷ್ಟ್ರದ್ವಜಕ್ಕೆ ಅವಮಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರು ಹೇಳಿದ್ದಾರೆ.

ಆರೋಪಿ ಚೀನಾ ಪ್ರಜೆ ಕಂಪನಿಯಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದು, ಆತನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯ ನಂತರ ಕಂಪನಿಯು ಆ ವ್ಯಕ್ತಿಯನ್ನು ಕೆಲಸದಿಂದ ವಜಾ ಮಾಡಿದೆ.

Related News

Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache