ರೈತರ ಸಾಲ ಮನ್ನಾ: ಯೋಗಿ ನಡೆಗೆ ರಾಹುಲ್ ಮೆಚ್ಚುಗೆ – News Mirchi

ರೈತರ ಸಾಲ ಮನ್ನಾ: ಯೋಗಿ ನಡೆಗೆ ರಾಹುಲ್ ಮೆಚ್ಚುಗೆ

86.68 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲ ಮನ್ನಾ ಮಾಡಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರದ ಸಾಲ ಮನ್ನಾ ತೀರ್ಮಾನ ಉತ್ತಮ ನಡೆಯಾಗಿದ್ದು ರಾಜ್ಯದ ರೈತರಿಗೆ ಭಾಗಶಃ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಆದರೆ ದೇಶಾದ್ಯಂತ ಸಂಕಷ್ಟ ಅನುಭವಿಸುತ್ತಿರುವ ರೈತರ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದು ಇದೇ ವೇಳೆ ಹೇಳಿದ್ದಾರೆ.

ರಾಜ್ಯಗಳ ನಡುವೆ ತಾರತಮ್ಯ ಮಾಡದೆ ದೇಶಾದ್ಯಂತ ಸಂಕಷ್ಟದಲ್ಲಿರುವ ರೈತರ ಕಷ್ಟಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ರಾಹುಲ್ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

ಮಂಗಳವಾರ ತಮ್ಮ ಮೊದಲ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಾಲ ರೂ. 36.359 ಕೋಟಿ ಮೊತ್ತದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿತ್ತು.

Loading...