ಟಿವಿಯಲ್ಲಿ ಮಾತ್ರ ಮಾತನಾಡುವ ಮೋದಿ : ರಾಹುಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಟೀಕಾ ಪ್ರಹಾರ ಮುಂದುವರೆಸಿದ್ದಾರೆ. ಪ್ರಧಾನಿ ಟಿವಿಯಲ್ಲಿ ಮಾತ್ರ ಮಾತನಾಡುತ್ತಾರೆ, ಪಾಪ್ ಮ್ಯೂಸಿಕ್ ಕಛೇರಿಯಲ್ಲಿ ಮಾತಾಡುತ್ತಾರೆ, ಆದರೆ ಸಂಸತ್ತಿನಲ್ಲಿ ಮಾತನಾಡುವುದಿಲ್ಲವೇ? ಎಂದು ಪ್ರಶ್ನಿಸಿದರು.

ಗರಿಷ್ಠ ಮುಖಬೆಲೆಯ ನೋಟುಗಳ ರದ್ದು ಕುರಿತಂತೆ ಸಂಸತ್ತಿನಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಂಗಳ.ವಾರ ಸಂಸತ್ತಿನ ಅವರಣದಲ್ಲಿ ರಾಹುಲ್ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ನೋಟು ರದ್ದು ಕುರಿತು ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುವ ಮೋದಿ, ಸಂಸತ್ತಿನಲ್ಲಿ ಮಾತನಾಡುವುದಿಲ್ಲವೇಕೆ ಎಂದು ಪ್ರಶ್ನಿಸಿದರು. ಇದೇ ತಿಂಗಳು 19 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಡೆದ ಗ್ಲೋಬಲ್ ಸಿಟಿಜನ್ ಫೆಸ್ಟಿವಲ್ ನಲ್ಲಿ ಮೋದಿ ಮಾಡಿದ ವೀಡಿಯೋ ಭಾಷಣವನ್ನು ಉದಾಹರಣೆ ನೀಡಿದರು.