ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ಮುಂಬೈ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ. ಆರ್.ಎಸ್.ಎಸ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಬುಧವಾರ ಮುಂಬೈನ ಬೀವಂಡಿ ಕೋರ್ಟ್ ಗೆ ಹಾಜರಾಗಿದ್ದರು. ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿದೆ.

ವ್ಯಾಸ ರಚಿತ ಮಹಾಭಾರತ

ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ 2014 ಮಾರ್ಚ್ 6 ರಂದು ಬೀವಂಡಿಯಲ್ಲಿನ ಬಹಿರಂಗ ಸಭೆಯಲ್ಲಿ ಮಾತನಾಡುತ್ತಾ ಮಹಾತ್ಮಾಗಾಂಧಿಯನ್ನು ಹತ್ಯೆ ಮಾಡಿದ್ದು ಆರ್.ಎಸ್.ಎಸ್ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಶ್ನಿಸಿ ಆರ್.ಎಸ್.ಎಸ್ ಕೋರ್ಟ್ ಮೊರೆ ಹೋಗಿತ್ತು. ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ ನಿನ್ನೆ ಸಂಜೆಯೇ ಬೀವಂಡಿಗೆ ಆಗಮಿಸಿದ್ದರು.

ಜಾಮೀನು ಮಂಜೂರಾದ ನಂತರ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಶ್ರೀಮಂತರು ಯಾರೂ ಸಾಲಿನಲ್ಲಿ ನಿಂತು ಹಣ ತೆಗೆದುಕೊಳ್ಳಲಿಲ್ಲ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದರು.

Related Post

error: Content is protected !!