ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಾಹುಲ್ |News Mirchi

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಾಹುಲ್

ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ. ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ಅವರು ರಾಹುಲ್ ಗಾಂಧಿಯವರಿಗೆ ಔಪಚಾರಿಕ ಪ್ರಮಾಣಪತ್ರವನ್ನು ನೀಡಿದರು.

47 ವರ್ಷ ವಯಸ್ಸಿನ ರಾಹುಲ್ ಗಾಂಧಿ ಸೋಮವಾರ ಅವಿರೋಧವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಮೂಲಕ 1998 ರಿಂದ ಸುದೀರ್ಘ ಕಾಲ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದ ಸೋನಿಯಾ ಗಾಂಧಿಯವರಿಂದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಮನಮಹೋನ್ ಸಿಂಗ್, ಪಕ್ಷವು ರಾಹುಲ್ ಅವಧಿಯಲ್ಲಿ ಮತ್ತಷ್ಟು ಉನ್ನತ ಸ್ಥಾನಕ್ಕೇರುತ್ತದೆ ಎಂದರು. ಕಾಂಗ್ರೆಸ್ ಕಛೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!