ಗೋಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ, ಓರ್ವನ ಸಾವು – News Mirchi

ಗೋಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ, ಓರ್ವನ ಸಾವು

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂದು ಆರೋಪಿಸಿ ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ ಕೆಲ ವ್ಯಕ್ತಿಗಳ ಮೇಲೆ ಸ್ಥಳೀಯರು ದಾಳಿ ನಡೆಸಿದ್ದು, ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಜೈಪುರದಿಂದ ಗೋವುಗಳನ್ನು ಅಕ್ರಮವಾಗಿ ಟ್ರಕ್ ಗಳಲ್ಲಿ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು, ಅಳ್ವಾರ್ ಸಮೀಪ ಟ್ರಕ್ ಗಳನ್ನು ತಡೆದು ತನಿಖೆ ನಡೆಸಿದ್ದರು. ಈ ವೇಳೆ ಕೆಲ ಟ್ರಕ್ ಗಳು ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದವು. ಆಗ ಗೋಸಂರಕ್ಷಕರು ಎಂದು ಹೇಳಿಕೊಂಡ ಕೆಲ ಸ್ಥಳೀಯರು ಪರಾರಿಯಾಗಲು ಯತ್ನಿಸಿದ ಟ್ರಕ್ ಗಳನ್ನು ತಡೆದು ಚಾಲಕರನ್ನು ಕೆಳಗಿಳಿಸಿ ಹಲ್ಲೆ ನಡೆಸಿದರು.

ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಹಲ್ಲೆ ನಡೆಸಿದ ವ್ಯಕ್ತಿಗಳು ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೆಹ್ಲೂಖಾನ್ ಎಂಬ ವ್ಯಕ್ತಿ ಸೋಮವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇನ್ನು ಕೆಲ ಚಾಲಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

Loading...