ಮಮತಾ ಬ್ಯಾನರ್ಜಿ, ರಾಜ್ಯಪಾಲರ ಮಾತಿನ ಯುದ್ಧ: ಮಧ್ಯಪ್ರವೇಶಿಸಿದ ರಾಜನಾಥ್ ಸಿಂಗ್ – News Mirchi

ಮಮತಾ ಬ್ಯಾನರ್ಜಿ, ರಾಜ್ಯಪಾಲರ ಮಾತಿನ ಯುದ್ಧ: ಮಧ್ಯಪ್ರವೇಶಿಸಿದ ರಾಜನಾಥ್ ಸಿಂಗ್

ಪಶ್ಚಿಮ ಬಂಗಾಳದಲ್ಲಿ ಕೋಮು ಗಲಭೆಯಿಂದ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದ್ದು, ಗಲಭೆ ಪೀಡಿತ ಬದುರೈನಿಂದ ಮತ್ತಷ್ಟು ಘರ್ಷಣೆಗಳು ವರದಿಯಾಗಿವೆ. ಪರಿಸ್ಥಿತಿಯನ್ನು ಹತೋಟಿಗೆ ತರಬೇಕಾದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರ ಮೇಲೆ ಮಾತಿನ ಯುದ್ಧ ಮುಂದುವರೆಸಿದ್ದು ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.

ಪರಸ್ಪರ ಮಾತಿನ ಯುದ್ಧದಲ್ಲಿ ಮುಳುಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯಪಾಲ ತ್ರಿಪಾಠಿ ಅವರಿಗೆ ಪರಿಸ್ಥಿತಿಯನ್ನು ನಿಭಾಯಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೆನಪಿಸಿದ್ದಾರೆ. ಇಬ್ಬರೊಂದಿಗೆ ಪ್ರತ್ಯೇಕವಾಗಿ ದೂರವಾಣಿ ಮೂಲಕ ಮಾತನಾಡಿರುವ ರಾಜನಾಥ್ ಸಿಂಗ್, ಸಮಸ್ಯೆಯನ್ನು ಬಗೆಹರಿಸಲು ಗಮನ ಹರಿಸುವಂತೆ ಸೂಚಿಸಿದ್ದು, ಸಾರ್ವಜನಿಕವಾಗಿ ಕೆಸರೆರಚಾಟ ಮಾಡದಂತೆ ಎಚ್ಚರಿಸಿದ್ದಾರೆ. ಗಲಭೆ ಪೀಡಿತ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ರಾಜ್ಯಪಾಲರು ಸಂವಿಧಾನದ ವ್ಯಾಪ್ತಿಯನ್ನು ಮೀರಿ ವರ್ತಿಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸುತ್ತಿದ್ದರೆ, ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು, ನಿಜವಾದ ಸಮಸ್ಯೆಯಿಂದ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ ಎಂದು ರಾಜ್ಯಪಾಲ ತ್ರಿಪಾಠಿ ಹೇಳಿದ್ದಾರೆ.

 

Contact for any Electrical Works across Bengaluru

Loading...
error: Content is protected !!