ಇಂದು ಗುರ್ಮೀತ್ ರೇಪ್ ಕೇಸ್ ತೀರ್ಪು : ಎರಡು ರಾಜ್ಯಗಳಲ್ಲಿ ಮೊಬೈಲ್ ಇಂಟರ್ನೆಟ್ ಬಂದ್ |News Mirchi

ಇಂದು ಗುರ್ಮೀತ್ ರೇಪ್ ಕೇಸ್ ತೀರ್ಪು : ಎರಡು ರಾಜ್ಯಗಳಲ್ಲಿ ಮೊಬೈಲ್ ಇಂಟರ್ನೆಟ್ ಬಂದ್

ಡೇರಾ ಸಚ್ಚಾ ಸೌದಾ ಮುಖಂಡ ಗುರ್ಮೀತ್ ರಾಮ್ ರಹೀಂ ಸಿಂಗ್ ವಿರುದ್ಧವಿರುವ ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶುಕ್ರವಾರ ತೀರ್ಪು ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಹರಿಯಾಣದ ಪಂಚಕುಲದಲ್ಲಿ ಉದ್ವಿಘ್ನತೆ ನೆಲೆಸಿದೆ.

ಡೇರಾ ಸಚ್ಚಾ ಸೌದಾಗೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಲಕ್ಷಾಂತರ ಬೆಂಬಲಿಗರಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ರಾಜ್ಯಗಳಲ್ಲಿ 72 ಗಂಟೆಗಳ ಕಾಲ ಮೈಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದಾರೆ. ಪಂಚಕುಲಕ್ಕೆ ಹೋಗುವ ಬಸ್ಸು ರೈಲುಗಳ ಮೇಲೆ ನಿರ್ಬಂಧ ಹೇರಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ.

ಗುರ್ಮೀತ್ ಗೆ ವಿರುದ್ಧವಾಗಿ ತೀರ್ಪು ಬಂದರೆ ಪ್ರತಿಭಟನೆಗಳು ಶುರುವಾಗುವ ಸಾಧ್ಯತೆಗಳಿವೆ. ಇದಕ್ಕೆ ಇಂಬು ಕೊಡುವಂತೆ ಸುಮಾರು ಒಂದು ಲಕ್ಷ ಗುರ್ಮೀತ್ ಅಭಿಮಾನಿಗಳು ಪಂಚಕುಲದಲ್ಲಿ ಸೇರಿದ್ದಾರೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಂಜಾಬ್ ಮತ್ತು ಹರಿಯಾಣಗಳಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಮಾತ್ರವಲ್ಲದೆ, 15 ಸಾವಿರ ಅರೆಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ 144 ಸೆಕ್ಷನ್ ಜಾರಿ ಮಾಡಲಾಗಿದೆ.

Loading...
loading...
error: Content is protected !!