ಕ್ರಿಕೆಟ್ ತಂಡದಲ್ಲಿ ಮೀಸಲಾತಿ ಬೇಕೆಂದ ಸಚಿವ – News Mirchi

ಕ್ರಿಕೆಟ್ ತಂಡದಲ್ಲಿ ಮೀಸಲಾತಿ ಬೇಕೆಂದ ಸಚಿವ

ಭಾರತ ಕ್ರಿಕೆಟ್ ತಂಡದಲ್ಲಿ ಎಸ್.ಸಿ ಮತ್ತು ಎಸ್.ಟಿ ಸಮುದಾಯದ ಆಟಗಾರರಿಗೆ ಮೀಸಲಾತಿ ಸೌಲಭ್ಯ ನೀಡಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಮೀಸಲಾತಿ ನೀಡುವುದರಿಂದ ತಂಡ ಉತ್ತಮ ಪ್ರದರ್ಶನ ನೀಡಬಲ್ಲದು. ತಂಡದಲ್ಲಿ ಈ ಸಮುದಾಯಗಳಿಗೆ ಶೇ.25 ರಷ್ಟು ಮೀಸಲಾತಿ ನೀಡುವುದರಿಂದ ಯಾವುದೇ ಸಮಸ್ಯೆಯಾಗದು. ಬದಲಿಗೆ ಈ ಸಮುದಾಯಗಳ ಆಟಗಾರರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿನ ಭಾರತ ತಂಡ ಪಾಕಿಸ್ತಾನದ ವಿರುದ್ಧ ಸೋಲನ್ನಪ್ಪಿರುವುದರ ಕುರಿತು ತನಿಖೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಿದ್ದರು. ಪಾಕ್ ವಿರುದ್ಧ ಭಾರೀ ಅಂತರದ ಸೋಲಿನಿಂದ ಬೇಸರವಾಗಿದೆ ಎಂದು ಅವರು ಹೇಳಿದರು.

ಹಿಂದಿನ ಸರಣಿಗಳಲ್ಲಿಯೂ ಪಾಕ್ ವಿರುದ್ಧ ಭಾರತ ಸೋತಿರಬಹುದು. ಆದರೆ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಭಾರತ ತಂಡಕ್ಕಾದ ಸೋಲು ಪ್ರತಿ ಭಾರತೀಯನೂ ಇದೊಂದು ಮ್ಯಾಚ್ ಫಿಕ್ಸಿಂಗ್ ಎಂದು ಯೋಚಿಸುವಂತೆ ಮಾಡಿದೆ. ಈ ಕುರಿತು ಬಿಸಿಸಿಐ ತನಿಖೆ ನಡೆಸಿ ಅನುಮಾನಗಳನ್ನು ಶೀಘ್ರ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Loading...