ರಾಯಣ್ಣ ಬ್ರಿಗೇಡ್ ನಿಲ್ಲುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ ಸ್ಪಷ್ಟನೆ

ಕೇಂದ್ರ ನಾಯಕರ ಎಚ್ಚರಿಕೆಯ ನಡುವೆಯೂ, ಬಿಜೆಪಿ ರಾಜ್ಯ ಮುಖಂಡ ಕೆ.ಎಸ್.ಈಶ್ವರಪ್ಪ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ನಡೆದ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರಪ್ಪ, ರಾಯಣ್ಣ ಬ್ರಿಗೇಡ್ ಬಡವರ, ಹಿಂದುಳಿದವರ ಏಳ್ಗೆಗಾಗಿ ಸ್ಥಾಪಿಸಲಾಗಿದೆಯೇ ಹೊರತು ಯಾವುದೇ ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ ಹಿಂದುಳಿದ ಸಮುದಾಯ ಇರುವವರೆಗೂ ರಾಯಣ್ಣ ಬ್ರಿಗೇಡ್ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

ರಾಯಣ್ಣ ಬ್ರಿಗೇಡ್ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ, ಈ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ರವರ ಜೊತೆಗಿನ ಚರ್ಚೆ ವೇಳೆ ವಿವರಿಸಿದ್ದೇನೆ. ಬಿಜೆಪಿ ನಾಯಕರು ಬ್ರಿಗೇಡ್ ನಲ್ಲಿ ಪಾಲ್ಗೊಳ್ಳಬೇಡಿ ಎಂದು ಏಕೆ ಸಲಹೆ ನೀಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದರು.

ಜನವರಿ 26 ರಂದು ಕೂಡಲಸಂಗಮದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಅಂದು 1 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದೆ ಎಂದರು.

Loading...

Leave a Reply

Your email address will not be published.

error: Content is protected !!