ಬುಧವಾರ ಕೃಷ್ಣ ಬಿಜೆಪಿ ಸೇರ್ಪಡೆ – News Mirchi

ಬುಧವಾರ ಕೃಷ್ಣ ಬಿಜೆಪಿ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬುಧವಾರ ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿದ 7 ವಾರಗಳ ನಂತರ ಅವರು ಬಿಜೆಪಿ ಸೇರುತ್ತಿದ್ದಾರೆ. ಮಾರ್ಚ್ 15 ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿಗೊಳಿಸಲಾಗಿತ್ತಾದರೂ ಕೃಷ್ಣ ಅವರ ಸಹೋದರಿ ನಿಧನರಾದ ಕಾರಣ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಮುಂದೂಡಿದ್ದರು.

ಬುಧವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

Loading...

Leave a Reply

Your email address will not be published.