ಆರು ರಾಜ್ಯಗಳ ಬಿಜೆಪಿ ಸರ್ಕಾರಗಳಿಗೆ ಸುಪ್ರೀಂ ನೋಟೀಸ್ |News Mirchi

ಆರು ರಾಜ್ಯಗಳ ಬಿಜೆಪಿ ಸರ್ಕಾರಗಳಿಗೆ ಸುಪ್ರೀಂ ನೋಟೀಸ್

ನವದೆಹಲಿ: ಬಿಜೆಪಿ ಆಡಳಿತದ ಆರು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ಗೋ ಸಂರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ದಾಳಿಗಳ ಕುರಿತು ವಿವರಣೆ ನೀಡುವಂತೆ ರಾಜಸ್ತಾನ, ಜಾರ್ಖಂಡ್, ಚತ್ತೀಸ್ಗಢ , ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗೆ ಆದೇಶಿಸಿದೆ. ಇತ್ತೀಚೆಗಷ್ಟೇ ರಾಜಸ್ಥಾನದ ಆಳ್ವಾರ್ ನಲ್ಲಿ ಗೋಸಂರಕ್ಷಕರು ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ. ಈ ವಿಷಯ ಈಗ ಸಂಸತ್ತಿನಲ್ಲಿಯೂ ಗದ್ದಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ.

ಈ ಹಿನ್ನೆಲೆಯಲ್ಲಿ ಆಳ್ವಾರ್ ಘಟನೆ ಕುರಿತು ಮೂರು ವಾರಗಳಲ್ಲಿ ವಿವರಣೆ ನೀಡಬೇಕೆಂದು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಗೆ ಸುಪ್ರೀಂ ಕೋರ್ಟ್ ನೋಟೀಸ್ ಕಳುಹಿಸಿದೆ. ಪೆಹ್ಲೂ ಖಾನ್ ಎಂಬ ವ್ಯಕ್ತಿ ಗೋವುಗಳನ್ನು ಟ್ರಕ್ ಗಳಲ್ಲಿ ಸಾಗಿಸುತ್ತಿದ್ದಾಗ ಈ ದಾಳಿ ನಡೆದಿತ್ತು. ಆದರೆ ಇಂತಹೊಂದು ಘಟನೆ ನಡೆದೇ ಇಲ್ಲವೆಂದು ರಾಜ್ಯಸಭೆಯಲ್ಲಿ ಸರ್ಕಾರ ಹೇಳಿದ್ದರಿಂದ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು.

Loading...
loading...
error: Content is protected !!